News

ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ನಿಗಾ ವ್ಯವಸ್ಥೆ

Share It

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆಯ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗಿದೆ.

ಮೆಟ್ರೋ ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ ಪ್ರದೇಶಗಳನ್ನೂ ಇವುಗಳು ಗಮನಿಸುತ್ತಿವೆ. ಕೃತಕಬುದ್ಧಿ ಮತ್ತೆ (ಎಐ) ತಂತ್ರಜ್ಞಾನದಿಂದ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ನೆರವಾಗಲಿವೆ.

ಮೆಟ್ರೋ ನಿಲ್ದಾಣದ ಮುಂದೆ ಇರುವ ವಾಹನಗಳ ಸಂಖ್ಯಾ ಫಲಕಗಳನ್ನು ಗುರುತಿಸಲು “ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್” ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ. ಎಐ ಆಧಾರಿತ ವಿಡಿಯೋ ವಿಶ್ಲೇಷಣೆಯೊಂದಿಗೆ, ಈ ತಂತ್ರಜ್ಞಾನ ಶಂಕಾಸ್ಪದ ಚಟುವಟಿಕೆಗಳು, ಅನುಮಾನಾಸ್ಪದ ಘಟನೆಗಳನ್ನು ತಕ್ಷಣ ಪತ್ತೆಹಚ್ಚಲು ಸಹಕಾರಿಯಾಗಿದೆ.

ಈ ಕುರಿತು ಬಿಎಂಆರ್‌ಸಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಮಾತನಾಡಿದ್ದು, ಪ್ರಯಾಣಿಕರ ಭದ್ರತೆ ಬಿ.ಎಂ.ಆರ್.ಸಿ.ಎಲ್ ನ ಪ್ರಮುಖ ಆದ್ಯತೆಯಾಗಿದೆ. ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸಲು ಶ್ರಮಿಸುತ್ತಿದೆ ಎಂದಿದ್ದಾರೆ.


Share It

You cannot copy content of this page