ಬೆಂಗಳೂರು: 2025-26ನೇ ಸಾಲಿನ ಡಿ.ಎಲ್.ಎಡ್, ಡಿ.ಪಿ.ಎಡ್ ಮತ್ತು ಡಿ.ಪಿ.ಎಸ್.ಇ ಕೋರ್ಸುಗಳ ವ್ಯಾಸಾಂಗಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಜೂ. 5 ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲಾಖಾ ವೆಬ್ ಸೈಟ್ https://www.schooleducation.karnataka.gov.in ನಲ್ಲಿ ಪ್ರಕಟಿಸಲಾದ ಮಾರ್ಗಸೂಚಿಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ, ಇತ್ಯಾದಿ ವಿವರ ಮತ್ತು ಇದರೊಂದಿಗೆ ಜಿಲ್ಲಾವಾರು ಡಿ.ಎಲ್.ಎಡ್, ಡಿ.ಪಿ.ಎಡ್ ಮತ್ತು ಡಿ.ಪಿ.ಎಸ್.ಇ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.