ಬೆಂಗಳೂರು: ಡಿಸಿಇಟಿ-2025 ಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ ಒಳಗೆ ಶುಲ್ಕ ಪಾವತಿಸಬೇಕಿದೆ. ಡಿಪ್ಲೊಮಾ ಮಾಡಿದವರಿಗೆ ಎಂಜಿನಿಯರಿಂಗ್ ಕೋರ್ಸ್ ಗೆ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಸಿಇಟಿ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ವಿವರಿಸಿದ್ದಾರೆ.