ಬೆಂಗಳೂರು: 2024-25ನೇ ಸಾಲಿನ ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ.
ಇಂದಿರಾ ಗಾಂಧಿ ಅಭಿವೃದ್ಧಿ ಕೇಂದ್ರದಿಂದ 2024-25ನೇ ಸಾಲಿನ ಕೆಎಎಸ್ ಪೂರ್ವಭಾವಿ ಪರೀಕ್ಷಾ ತರಬೇತಿಗೆ ಅಭ್ಯರ್ಥಿಗಳನ್ನು ನಿಯೋಜಿಸುವ ಉದ್ದೇಶದಿಂದ ಈ ಪರೀಕ್ಷೆ ನಡೆಸಲಾಗುತ್ತದೆ.
ಮೇ. 31 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.