ಬೆಂಗಳೂರು: ಪದವಿ ಮುಗಿಸಿ ನಂತರ ಸರ್ಕಾರಿ ಉದ್ಯೋಗ ಅಥವಾ ಬ್ಯಾಂಕ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ 9 ರಿಂದ ಆರಂಭವಾಗಿದ್ದು, ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ಸೈಟ್ https://sbi.co.in ಗೆ ಭೇಟಿ ನೀಡುವ ಮೂಲಕ ಮೇ 29 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 2,964 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.