ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 10 ರಿಂದ ಆಯೋಜಿಸಲಾಗಿದ್ದು, ತರಬೇತಿಗೆ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರು ಆಗಿರಬೇಕು, ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಇನ್ನು ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ. ಮೊಬೈಲ್ ಸಂಖ್ಯೆಗಳಾಗ 9380220884, 9380162042, 9113880324 ಮೂಲಕ ಕೂಡ ಮಾಹಿತಿ ಪಡೆಯಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.