Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

Share It

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೋರ್ಸ್ 3 ವರ್ಷದ ಅವಧಿಯದ್ದಾಗಿದೆ.

ಪ್ರವೇಶಕ್ಕೆ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ ಶಾಲೆಯ ಮುಖ್ಯಸ್ಥರು ದೃಡೀಕರಿಸಿದ ಎಸ್.ಎಸ್.ಎಲ್.ಸಿ / ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಮೂಲ ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ ಬಿ.ಇ.ಓ ರವರಿಂದ ದೃಡೀಕರಿಸಿರಬೇಕು), ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 6 ಭಾವಚಿತ್ರಗಳು, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಕನ್ನಡ/ ಗ್ರಾಮೀಣ/ ಹೈದ್ರಾಬಾದ್-ಕರ್ನಾಟಕ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯ ಜಾಲತಾಣ https://gpt.karnataka.gov.in/gittbengaluru/public/ ಭೇಟಿ ನೀಡಬಹುದಾಗಿದೆ. ಸಂಸ್ಥೆಯ ಪ್ರಾಂಶುಪಾಲರಾದ ಎಸ್ ಉಷಾ ಅವರ ಮೊಬೈಲ್ ಸಂಖ್ಯೆಯಾದ 9481101049 ಅಥವಾ ವಿಭಾಗದ ಮುಖ್ಯಸ್ಥರಾದ ವಿ. ಶ್ರೀನಿವಾಸಯ್ಯ ಅವರ ಮೊಬೈಲ್ ಸಂಖ್ಯೆಯಾದ 9448705205 ಕ್ಕೆ ಕೂಡ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.


Share It

You cannot copy content of this page