ಬೆಂಗಳೂರು: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಿಂದ 2024-25ನೇ ಸಾಲಿನ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ (ಸರ್ಕಾರಿ/ ಸರ್ಕಾರೇತರ ಸಂಸ್ಥೆಗಳು/ ಟ್ರಸ್ಟ್/ ಕಂಪನಿಗಳು) ರಾಜ್ಯ ಪರಿಸರ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು/ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಯು ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ಅರ್ಜಿ/ ನಾಮ ನಿರ್ದೇಶನ ಸಲ್ಲಿಸ ಬಯಸುವವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯ ಬಗ್ಗೆ ವಿವರವಾದ ಮಾಹಿತಿಯನ್ನು ತಮ್ಮ ಲೆಟರ್ ಹೆಡ್ ಮೂಲಕ ಭರ್ತಿ ಮಾಡಿ ಅರ್ಜಿಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, (ಜೀವಿ ಪರಿಸ್ಥಿತಿ ಮತ್ತು ಪರಿಸರ), ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಕೊಠಡಿ ಸಂಖ್ಯೆ 709, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, 4ನೇ ಹಂತ, ಬೆಂಗಳೂರು-560001 ಇವರಿಗೆ ಮೇ 31ರ ಒಳಗಾಗಿ ಸಾಮಾನ್ಯ ಅಂಚೆ/ ನೋಂದಾಯಿತ ಅಂಚೆ ಸ್ವೀಕೃತಿ/ ಸ್ಪೀಡ್ ಪೋಸ್ಟ್ ಅಥವಾ ಕೋರಿಯರ್ ಮೂಲಕ ಮಾತ್ರ ಸಲ್ಲಿಸಬೇಕಿದೆ.
ಹೆಚ್ಚಿನ ವಿವರಗಳಿಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯತ್ ಕಛೇರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲಾ ಪ್ರಾದೇಶಿಕ ಕಛೇರಿಗಳು ಅಥವಾ https://forest.karnataka.gov.in ಮತ್ತು https://kbbwebportal.karnataka.gov.in ಗೆ ಸಂಪರ್ಕಿಸಬಹುದಾಗಿದೆ.