ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗೌರವ ಸಂಭಾವನೆಯನ್ನು ಹೆಚ್ಚಿಸಿದೆ.
ಎಲ್ಲ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು 2 ಸಾವಿರ ರೂ. ಗಳಷ್ಟು ಹೆಚ್ಚಿಸಲಾಗಿದೆ ಮತ್ತು ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ. ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ.
ಪರಿಷ್ಕೃತ ಸಂಭಾವನೆ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12 ಸಾವಿರ ರೂ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ ಆಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 14 ಸಾವಿರ ರೂ ಸಿಗಲಿದೆ.