ಬೆಂಗಳೂರು: ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 22ರಂದು ಪಿಜಿಸಿಇಟಿ ನಡೆಯಲಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಈ ದಿನಾಂಕ ವಿಸ್ತರಣೆ ಕೇವಲ ಎಂಬಿಎ, ಎಂಸಿಎ ಗೆ ಮಾತ್ರ ಅನ್ವಯವಾಗುತ್ತದೆ. ಎಂ.ಟೆಕ್, ಎಂಇ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮುಗಿದಿದ್ದು, ಮೇ 31ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
