ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ಯೋಜನೆಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ತಂತ್ರಜ್ಞಾನ ಮತ್ತು ಸಾಫ್ಟ್ ವೇರ್ ಅಪ್ಲಿಕೇಶನ್ ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು. ಆಸಕ್ತ ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ -560 029 ಇಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬೇಕಿದೆ.
ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಖುದ್ದಾಗಿ ಜೂನ್ 16 ರ ಸಂಜೆ 5.30 ರೊಳಗೆ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29578688 ಗೆ ಸಂಪರ್ಕಿಸಬಹುದಾಗಿದೆ.