ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆಂಪಯ್ಯ ಸೋಮಶೇಖರ್ ಅವರು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ನಿವೃತ್ತಿ ಹೊಂದುತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಕೊಲಿಜಿಯಂ ನಲ್ಲಿ ನ್ಯಾಯಮೂರ್ತಿ ಸೋಮಶೇಖರ್ ಅವರಿಗೆ ಬಡ್ತಿ ನೀಡಲು ಶಿಫಾರಸ್ಸು ಮಾಡಲಾಗಿತ್ತು.