ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರುಗಳ ಹುದ್ದೆಗಳಿಗೆ ಎದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿದೆ.
ಒಟ್ಟು 51 ಸಾವಿರ ಅತಿಥಿ ಶಿಕ್ಷಕರ ಪೈಕಿ ಸರ್ಕಾರಿ ಪ್ರಾಥಮಿಕಿ ಶಾಲೆಗಳಿಗೆ 40 ಸಾವಿರ ಹಾಗೂ ಪ್ರೌಢ ಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಇನ್ನು ಮೇ 26 ರಂದು ಶಾಲೆಗಳು ಪುನರಾರಂಭವಾಗಲಿದ್ದು, ಈ ಸಂಬಂಧ ಅತಿಥಿ ಶಿಕ್ಷಕರಿಗೆ ನೀಡಲಾಗುವ ಗೌರವಧನದ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ, ತಾಲೂಕುವಾರು ವಿವರಗಳ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದೆ.