Health News

ಕೋವಿಡ್ ಪ್ರಕರಣಗಳ ಏರಿಕೆ; ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ ಆರೋಗ್ಯ ಇಲಾಖೆ

Share It

ಬೆಂಗಳೂರು: ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಕಾಣುತ್ತಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಕೆಲ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದೆ.

ಈ ವರ್ಷ ಒಟ್ಟು 35 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ಆದರೆ ಯಾವುದೇ ಕೋವಿಡ್ ಮರಣ ಪ್ರಕರಣ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲವಾದರೂ ಎಚ್ಚರಿಕೆಯನ್ನು ವಹಿಸುವುದು ಮುಖ್ಯವಾಗಿದೆ ಎಂದು ಹೇಳಿದೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸಬೇಕು. ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ಬಳಕೆಯನ್ನು ಮಾಡುವುದು ಅಗತ್ಯವಾಗಿದೆ. ರೋಗದ ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ -19 ಪರೀಕ್ಷೆಗೆ ಒಳಪಡುವುದರಿಂದ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.


Share It

You cannot copy content of this page