ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಏರಿಗತಿಯಲ್ಲಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 80 ಸಕ್ರೀಯ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 191 ಮಂದಿ ಪರೀಕ್ಷೆಗೊಳಪಟ್ಟಿದ್ದು, 37 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಈ ನಡುವೆ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಬೆಂಗಳೂರಿನಲ್ಲಿ ಒಟ್ಟಾರೆ 183 ಜನರಿಗೆ ಕೋವಿಡ್ ಪರೀಕ್ಷೆಗೊಳಪಡಿಸಲಾಗಿ 35 ಮಂದಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. 73 ಸಕ್ರೀಯ ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ಗ್ರಾಮಾಂತರ -2 ದಕ್ಷಿಣಕನ್ನಡ-1, ಮೈಸೂರು-3 ಮತ್ತು ವಿಜಯನಗರ -1 ಸಕ್ರೀಯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು 80 ಪ್ರಕರಣಗಳು ವರದಿಯಾಗಿವೆ.