ಬೆಂಗಳೂರು: ಕಲಬುರ್ಗಿ ಜಿಲ್ಲೆಗೆ ದೊರಕಿದ “ಪ್ರಜಾಸೌಧಗಳ” ಕೊಡುಗೆ ದೊರಕಿದೆ.
ಕಲಬುರಗಿ ಜಿಲ್ಲೆಯ ಕಾಳಗಿ, ಯಡ್ರಾಮಿ, ಕಮಲಾಪುರ, ಶಹಾಬಾದ ತಾಲೂಕು ಆಡಳಿತಗಳಿಗೆ ಸುಸಜ್ಜಿತ ಹಾಗೂ ಸುವ್ಯವಸ್ಥಿತವಾದ “ಪ್ರಜಾಸೌಧ“ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ.
ಶುಕ್ರವಾರ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ಪ್ರಜಾಸೌಧದ ಪ್ರಸ್ತಾವನೆಯನ್ನು ಹಸ್ತಾಂತರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ತಾಲೂಕು ಆಡಳಿತಗಳ ಅನುಕೂಲಕ್ಕೆ ಮಹತ್ವದ ಪ್ರಜಾಸೌಧ ಕಟ್ಟಡಗಳನ್ನು ಒದಗಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಒಂದೇ ಸೂರಿನ ಅಡಿಯಲ್ಲಿ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವಂತಹ ಸುಸಜ್ಜಿತ ಕಟ್ಟಡಗಳು ದೊರಕಿದಾಗ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಡಾ. ಫೌಜಿಯಾ ತರನ್ನುಮ್ ವಿವರಿಸಿದ್ದಾರೆ.