ಬೆಂಗಳೂರು: ಕೋವಿಡ್‌ನಿಂದ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ.
ಕಳೆದ 24 ಗಂಟೆಯಲ್ಲಿ 58 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 238(ಶೇ.13.8)ಕ್ಕೆ ಏರಿಕೆಯಾಗಿದ್ದು, ಶನಿವಾರ ಬೆಂಗಳೂರು ಗ್ರಾಮಾಂತರದ 63 ವರ್ಷದ ವೃದ್ದರೊಬ್ಬರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ.
53 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಂದೇ ದಿನ ರಾಜ್ಯಾದ್ಯಂತ 420 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. 13 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.