ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ರಾಜ್ಯದಲ್ಲಿ ಒಂದೇ ದಿನ 17 ಹೊಸ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರೀಯ ಪ್ರಕರಣಗಳು ಶೇ.6.1 ರಷ್ಟು ದಾಖಲಾದಂತಾಗಿದೆ.
ಕಳೆದ 24 ಗಂಟೆಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೆ 253 ಸಕ್ರೀಯ ಪ್ರಕರಣಗಳು ದಾಖಲಾಗಿವೆ. 276 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅದರಲ್ಲಿ 257 ಮಂದಿ ಆರ್‌ಟಿಪಿಸಿಆರ್ ಪರೀಕ್ಷೆ ಮತ್ತು 19 ಮಂದಿಗೆ ಆರ್‌ಎಟಿ ಪರೀಕ್ಷೆಯನ್ನು ಮಾಡಲಾಗಿದೆ. ಒಟ್ಟಾರೆ 3 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ.1 ರಿಂದ ಈವರೆಗೆ ಒಟ್ಟು 442 ಮಂದಿ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 185 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.