ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವದ ಹಿನ್ನಲೆ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯ ಲೆಕ್ಕಾಚಾರದಲ್ಲಿ ದಾಖಲೆಯನ್ನು ಬರೆದಿದೆ.
ನೇರಳೆ ಮತ್ತು ಹಸಿರು ಮಾರ್ಗದ ಸೇರಿದಂತೆ ಬುಧವಾರ ಒಂದೇ ದಿನ 9,66,732 ಜನರು ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಹೊಸ ದಾಖಲೆ ಬರೆಯಲಾಗಿದೆ, ಈ ಹಿಂದಿನ ದಾಖಲೆ ಮುರಿಯಲಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಾರ, ಎಂದಿಗಿಂತ ಬುಧವಾರ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದ್ದು, ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದರೆ, ಹಸಿರು ಮಾರ್ಗದಲ್ಲಿ 2,84,674 ಜನರು ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ.