Health News

ರಾಜ್ಯದಲ್ಲಿ 61 ಹೊಸ ಕೋವಿಡ್ ಪ್ರಕರಣ ದಾಖಲು; 65 ವರ್ಷದ ವೃದ್ದ ಸಾವು

Share It

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಶೇ 6.4 ರಷ್ಟು ವರದಿಯಾಗಿದ್ದು, 65 ವರ್ಷದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ.

ಗುರುವಾರ ಒಂದೇ ದಿನದಲ್ಲಿ 45 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 644 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ 566 ಮಂದಿ ಆರ್‌ಟಿಪಿಸಿಆರ್ ಪರೀಕ್ಷೆ ಮತ್ತು 796 ಮಂದಿಗೆ ಆರ್‌ಎಟಿ ಪರೀಕ್ಷೆಯನ್ನು ಮಾಡಲಾಗಿದೆ. ಒಟ್ಟು 5 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ್ತುತಿದ್ದಾರೆ.

ಜ.1 ರಿಂದ ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈವರೆಗೆ 338 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ದಾವಣಗೆರೆಯಲ್ಲಿ 65 ವರ್ಷದ ವೃದ್ದರೊಬ್ಬರು ಆರೋಗ್ಯ ಸಮಸ್ಯೆಯಿಂದ ಮೇ 24 ರಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Share It

You cannot copy content of this page