ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ 11 ಮಂದಿ ಕಾಲ್ತುಳಿತ ಸಾವುಗಳ ಪ್ರಕರಣದ ಸಂಬಂಧ ಅಮಾನತುಗೊಂಡು ತೆರವಾಗಿರುವ ಸ್ಥಾನಗಳಿಗೆ ಹೊಸ ನಿಯೋಜನೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸ್ಥಾನಕ್ಕೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಸ್ಥಾನಕ್ಕೆ ಸಿಸಿಬಿಯ ಡಿಸಿಪಿ ಅಕ್ಷಯ್ ಮಚ್ಚಿಂದ್ರ ರನ್ನು ನಿಯೋಜಿಸಲಾಗಿದೆ. ಎಸಿಪಿ ಸ್ಥಾನಕ್ಕೆ ರಾಮಚಂದ್ರ ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿ ದೇವೇಂದ್ರಪ್ಪ ಅವರುಗಳನ್ನು ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.