Education News

ಡಿಸಿಇಟಿ ರ್ಯಾಂಕ್ ಪಡೆದವರ ದಾಖಲೆ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

Share It

ಬೆಂಗಳೂರು: ಜೂ.10ರಿಂದ 13ರವರೆಗೆ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸುಗಳ ನೇರ ಪ್ರವೇಶಾತಿಗೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ದಾಖಲಾತಿ ಪರಿಶೀಲನೆ ನಡೆಯುವ 37 ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಮುಂಗಡವಾಗಿ ದಿನಾಂಕ ನಿಗದಿ ಮಾಡಿಕೊಂಡು ತಮಗೆ ಹತ್ತಿರವಾಗುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು ಎಂದು ಹೇಳಿದ್ದಾರೆ.

ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್.ಸಿ.ಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿ.ಎ.ಪಿ.ಎಫ್, ಮಾಜಿ-ಸಿ.ಎ.ಪಿ.ಎಫ್ ಎಂದು ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ವಿವರಿಸಿದ್ದಾರೆ.


Share It

You cannot copy content of this page