ಬೆಂಗಳೂರು: ಕೊಪ್ಪಳ ವಿಶ್ವವಿದ್ಯಾಲಯದಿಂದ ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ (ಎಇಡಿಪಿ), ಬಿ.ಎಸ್.ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಯುಯುಸಿಎಂಎಸ್ https://uucms.karnataka.gov.in/ ತಂತ್ರಾಂಶದ ಮುಖಾಂತರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕಿದೆ. ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ನಿಗದಿತ ದಿನಾಂಕದ ಒಳಗೆ ಪ್ರವೇಶಾತಿಯನ್ನು ಪಡೆದುಕೊಳ್ಳಬೇಕು. ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಪ್ರಭಾರ ಕುಲಸಚಿವರು ತಿಳಿಸಿದ್ದಾರೆ.