Job News

ವಿದ್ಯುತ್ ಪ್ರಸರಣ ನಿಗಮದಲ್ಲಿ 35 ಸಾವಿರ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು: ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಬುಧವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದೆ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಎನ್.ಪಿ.ಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ, ನಾವು ಒ.ಪಿ.ಎಸ್ ಜಾರಿಮಾಡುವುದಾಗಿದೆ ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ. ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಅದೂ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂದಿತು. ಈಗ 34 ಸಾವಿರ ಮೆಘಾ ವ್ಯಾಟ್ ಉತ್ಪಾದನೆಯ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60 ಸಾವಿರ ಮೆಘಾ ವ್ಯಾಟ್ ಉತ್ಪಾದನೆ ಗುರಿ ತಲುಪಿದ ತಕ್ಷಣ ಇದು ಸಾಧ್ಯವಗಲಿದೆ ವಿಶ್ವಾಸ ವ್ಯಕ್ತಪಡಿಸಿದರು.


Share It

You cannot copy content of this page