ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿಸಿಇಟಿ ಭಾನುವಾರ ಸುಗಮವಾಗಿ ನಡೆದಿದ್ದು, ಕ್ರಮವಾಗಿ ಶೇ.95.73 ಮತ್ತು ಶೇ.93.85ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ರಾಜಧಾನಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಒಟ್ಟು 68 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಪಡಿಸಲಾಗಿತ್ತು. ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.