ಬೆಂಗಳೂರು: ಬೆಂಗಳೂರನ್ನು ಕಟ್ಟಿಸಿದ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಬೆಂಗಳೂರು ನಗರ ವಿವಿಗೆ ಇಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ ಕೆಂಚಪ್ಪಗೌಡರು ಆಗ್ರಹಿಸಿದರು.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬೆಂಗಳೂರಿನ ಯಾವುದಾದರೂ ಒಂದು ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರನ್ನು ಇಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.