News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

ಕೆಂಪೇಗೌಡರು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಅವರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಹೇಳಿದರು.


Share It

You cannot copy content of this page