News

ಎರಡು ದಿನ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ

Share It

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮಳೆಯಾಗುತ್ತಿದ್ದು, ಇಂದಿನಿಂದ ಎರಡು ದಿನ ಸಹ ಮುಂದುವರೆಯುವ ಸಾಧ್ಯತೆ ಇದೆ.

ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕಲಬುರಗಿ, ಬೀದರ್ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಹಾಗೂ ಚಿತ್ರದುರ್ಗದಲ್ಲಿ ಸಾಧಾರಣ ಇಲ್ಲವೇ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ಹಾಗೂ ರಾಜ್ಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಾಗಲಿದೆ. ಜೋರು ಗಾಳಿ ಬೀಸುತ್ತಿರುವ ಕಾರಣ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೆಯೇ ನದಿ ತೀರದಲ್ಲಿನ ಗ್ರಾಮಸ್ಥರಿಗೂ ಕೂಡಾ ಎಚ್ಚರಿಕೆ ನೀಡಿದ್ದು, ನದಿ ಪಾತ್ರದತ್ತ ತೆರಳದಂತೆ ಸೂಚಿಸಲಾಗಿದೆ.


Share It

You cannot copy content of this page