ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾ ವಿಶೇಷ ಸಭೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ವಿಶೇಷ ಸಭೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರೈತ ಮೋರ್ಚಾ ಕಾರ್ಯಚಟುವಟಿಕೆಯನ್ನು ಹೆಚ್ಚು ಸಕ್ರಿಯಗೊಳಿಸಬೇಕು, ಸದೃಢ ಸಂಘಟನೆ ಕಟ್ಟಬೇಕು ಎಂದು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಹಕಾರ ಕ್ಷೇತ್ರದಲ್ಲಿನ ಬಿಜೆಪಿ ಬೆಂಬಲಿತ ಸದಸ್ಯರಾದ ಸತೀಶ್ ಕಡತನಮನೆ, ಬಿ.ಸಿ.ಆನಂದ್, ಬೈರೇಗೌಡ, ವೇಣುಗೋಪಾಲ್ ರೆಡ್ಡಿ, ಬಿ. ಶೇಖರಪ್ಪ, ಜಿ.ಎನ್.ಸ್ವಾಮಿ, ಮಲ್ಲಿಕಾರ್ಜುನ ಹೊರಕೇರಿ, ನಿಂಗನೌಡ್ರು ಮರಿಗೌಡ, ಉಮೇಶ್ ರಾ. ಹೆಬಸೂರ, ನಾಗಪ್ಪ ಸುಕದ, ಶಂಕರ ಮುಗದ, ಸುರೇಶ್ ಬಣವಿ, ಗೀತಾ ಮರಿಲಿಂಗಣ್ಣನವರ ಮತ್ತು ಕೆ.ಆರ್.ಆನಂದಪ್ಪ ಅವರನ್ನು ಸನ್ಮಾನಿಸಲಾಯಿತು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಸಿ. ಕಲ್ಮರುಡಪ್ಪ, ಡಾ.ಬಿ.ಸಿ.ನವೀನ್ ಕುಮಾರ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಭಾರತಿ ಮಲ್ಲಿಕಾರ್ಜುನ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ. ರುದ್ರೇಶ್, ರೈತ ಮೋರ್ಚಾ ಕಾರ್ಯದರ್ಶಿ ಬಸವರಾಜ್ ಕುಂದಗೋಳಮಠ ಮತ್ತು ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.