Education News

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Share It

ಬೆಂಗಳೂರು: 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಜು.15ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಾಚಿ ಪಾಂಡೆ ಅವರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಪ್ರತಿ ಜಿಲ್ಲೆಯಿಂದ ಕನಿಷ್ಠ 50 ರಿಂದ 60 ಶಿಕ್ಷಕರು ಅರ್ಜಿ ಸಲ್ಲಿಸುವಂತೆ ಪ್ರೋತ್ಸಾಹಿಸಬೇಕು ಎಂದು ಸೂಚನೆ ನೀಡಿದ್ದು, ಶಾಲಾ, ಕಾಲೇಜುಗಳ ಮುಖ್ಯಸ್ಥರು ಮತ್ತು ಸಂಬಂಧಿಸಿದ ಇಲಾಖಾಧಿಕಾರಿಗಳು ಈ ನಿಟ್ಟಿನಲ್ಲಿ ಶಿಕ್ಷಕರನ್ನು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮತ್ತು ರಾಜ್ಯ ಮಂಡಳಿಗೆ ಸಂಯೋಜನೆಗೊಂಡಿರುವ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಯಂಗೊಂಡ, ಮನೆಪಾಠಗಳಲ್ಲಿ ತೊಡಗಿಸಿಕೊಳ್ಳದ ಹಾಗೂ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರೈಸಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಪ್ರಶಸ್ತಿಗೆ ಆನ್ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕ್ಯಾಲೆಂಡರ್ ವರ್ಷದಲ್ಲಿ ಕನಿಷ್ಠ ನಾಲ್ಕು ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾಗಿರುವರು ಸಹ ಪ್ರಶಸ್ತಿಗೆ ಅರ್ಹರು ಎಂದು ನಿರ್ದೇಶಕರು ತಿಳಿಸಿದ್ದಾರೆ.


Share It

You cannot copy content of this page