ಬೆಂಗಳೂರು: ಕೆ.ಆರ್.ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಟೆಕ್ 1ನೇ ರಿಂದ 5ನೇ ಸೆಮಿಸ್ಟರ್ ಹಾಗೂ ಎಂ.ಟೆಕ್ 1ನೇ ಮತ್ತು 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೋಧಿಸಲು ಎಐಸಿಟಿಇ/ಯುಜಿಸಿ ನಿಯಮಗಳಿಗನುಸಾರ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು, ಸಂಪೂರ್ಣ ವಿವರಗಳನ್ನು ಯುವಿಸಿಇ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗಧಿತ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಅರ್ಜಿಯನ್ನು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಛೇರಿ, ಯುವಿಸಿಇ. ಕೆ.ಆರ್ ವೃತ್ತ ಇಲ್ಲಿಗೆ ಜುಲೈ 19 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಸಮನ್ವಯಧಿಕಾರಿ (ತಾಂತ್ರಿಕೇತರ ವಿಷಯ) ಇವರನ್ನು ಸಂಪರ್ಕಿಸಬಹುದಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ವೆಬ್ ಸೈಟ್ ನಲ್ಲಿ ಅಥವಾ ನೇರವಾಗಿ ತಿಳಿಸಲಾಗುತ್ತದೆ ಎಂದು ಪ್ರಭಾರ ಕುಲಸಚಿವರು ತಿಳಿಸಿದ್ದಾರೆ.