ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಪ್ಯಾಲೇಸ್ ರಸ್ತೆಯ ಕೇಂದ್ರ ಹವಾಮಾನ ಇಲಾಖೆಯ ಪ್ರದೇಶಿಕ ಕೇಂದ್ರದಿಂದ ಭಾನುವಾರ ಮಾಹಿತಿ ನೀಡಿರುವ ಅವರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ,ಚಿಕ್ಕಮಗಳೂರು, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನಾಳೆ ಮಧ್ಯಾಹ್ನದವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.