News

ದಾವಣಗೆರೆ ಸಂಸದೆ ಡಾ.ಪ್ರಭಾ ಸ್ಥಾನ ಅನೂರ್ಜಿತ ಕೋರಿದ್ದ ಅರ್ಜಿ ವಜಾ

Share It

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ಗೆದ್ದಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕಾಂಗ್ರೆಸ್‌ನ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ ಎಸ್‌ ಗಾಯತ್ರಿ ಸಿದ್ದೇಶ್ವರ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಐ ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ. ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಆಮಿಷ ಎಂದು ಪರಿಗಣಿಸಲಾಗದು ಎಂಬ ವಾದ ಮಾನ್ಯ ಮಾಡಿರುವ ನ್ಯಾಯಪೀಠ ಅರ್ಜಿ ತಿರಸ್ಕರಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರಭಾ ಮಲ್ಲಿಕಾರ್ಜುನ್‌ ಪರ ಹೈಕೋರ್ಟ್‌ ವಕೀಲ ಪ್ರಶಾಂತ್ ಗೌಡರ್‌ ವಾದಿಸಿರು.

ಡಾ. ಪ್ರಭಾ ಮಲ್ಲಿಕಾರ್ಜುನ ಅವರು, ಮತದಾರರಿಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ವಿತರಿಸುವ ಮೂಲಕ ಮಹಿಳೆಯರಿಗೆ ವರ್ಷಕ್ಕೆ ₹1 ಲಕ್ಷ ಕೊಡುವ ಭರವಸೆ ನೀಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 123(1), 123(2), 123(4) ಮತ್ತು 123(6)ಕ್ಕೆ ವಿರುದ್ಧವಾಗಿದೆ. ಮತದಾರರಿಗೆ ಲಂಚದ ಆಮಿಷ ಒಡ್ಡಿ ಚುನಾವಣಾ ಅಕ್ರಮ ಎಸಗಿರುವ ಇವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.


Share It

You cannot copy content of this page