News

ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

Share It

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗುರುವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಬಗ್ಗೆ ಕೇಳಿದಾಗ, ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ.‌ ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು ಹೀಗೇ ಎಲ್ಲರೂ ತಪ್ಪು ಹುಡುಕುವವರೇ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.


Share It

You cannot copy content of this page