News

ಜಿಬಿಎ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶ; 7.38 ಲಕ್ಷ ದಂಡ

Share It

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಕೂಡ, ಅಕ್ರಮವಾಗಿ ಏಕ ಬಳಕೆ ಪ್ಲಾಸ್ಟಿಕ್ ಕವರ್‌ಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನೆಡೆಸಲಾಗಿದೆ.

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳು ಉತ್ಪಾದಕರು ಹಾಗೂ ದಾಸ್ತಾನುದಾರರ ಮೇಲೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಪ್ಲಾಸ್ಟಿಕ್ ವಶಕ್ಕೆ ಪಡೆದು, ಕೆ.ಆರ್.ಮಾರುಕಟ್ಟೆಯಲ್ಲಿ ಒಂದು ಗೋಡೌನ್ ಸೀಜ್ ಮಾಡಲಾಗಿದೆ.


Share It

You cannot copy content of this page