ಬೆಂಗಳೂರು: ಪಿಎಂ ನರೇಂದ್ರ ಮೋದಿ ಹಾಸನದಲ್ಲಿ ಸಂಭವಿಸಿದ ಗಣೇಶ ವಿಸರ್ಜನೆ ವೇಳೆಯ ಅಪಘಾತದಲ್ಲಿ ಆದ ಜೀವಹಾನಿಗಳಿಗೆ ಸಂತಾಪ ಸೂಚಿಸಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ದುರ್ಘಟನೆಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕದ ಹಾಸನದಲ್ಲಿ ನಡೆದ ಗಣೇಶ ವಿಸರ್ಜನೆ ಸಮಯದಲ್ಲಿನ ಟ್ರಕ್ ಅಪಘಾತವು ಹೃದಯ ವಿದ್ರಾವಕವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೆನೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಲಾಗಿದೆ ಎಂದಿದ್ದಾರೆ.