News

ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ವಿಶೇಷ ಕಾಯ್ದೆಗೆ ಒತ್ತಾಯ

Share It

ಬೆಂಗಳೂರು: ರಾಜ್ಯಾದ್ಯಂತ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಲು ವಿಶೇಷ ಕಾಯ್ದೆ ತರಬೇಕು ಎಂದು ಅ ಲ್ಪಸಂಖ್ಯಾತರ ಸೌಹಾರ್ದ ಸಮಿತಿ ಒತ್ತಾಯಿಸಿದೆ.

ಶನಿವಾರ ಅಲ್ಪಸಂಖ್ಯಾತರ ಸೌಹಾರ್ದ ಸಮಿತಿ ಮುಖ್ಯ ಸಂಯೋಜಕ ಜಾವೀದ್ ಖಾನ್ ನೇತೃತ್ವದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹಮದ್‌ಗೆ ಮನವಿ ಪತ್ರಿ ನೀಡಿದೆ. ರಾಜ್ಯದಲ್ಲಿ ಕೆಲ ರಾಜಕಾರಣಿಗಳು ಮುಸ್ಲಿಂ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಗುರಿ ಮಾಡಿ ಸಾರ್ವಜನಿಕರಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಮೈಸೂರು ದಸರಾ ಉತ್ಸವದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮೇಲೆ ಕೇವಲ ಧರ್ಮದ ಆಧಾರದ ಮೇಲೆ ಅವಹೇಳನ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಮುಸ್ಲಿಂ ಸಮುದಾಯದಲ್ಲಿ ಮಧ್ಯಮ ವರ್ಗದವರು ಕೂಲಿ-ನಾಲಿ, ಗ್ಯಾರೇಜ್ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಾ ಜೀವನ ಸಾಗಿಸುವರೆ ಹೆಚ್ಚಾಗಿದ್ದಾರೆ. ಕೆಲ ಕೋಮುವಾದಿ ಕಿಡಿಗೇಡಿಗಳು ಹಿಂದೂ-ಮುಸ್ಲಿಮ್ ಹೆಸರಲ್ಲಿ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಅಶಾಂತಿ ಉಂಟುಮಾಡಿದ್ದಾರೆ. ಅಷ್ಟೇ ಅಲ್ಲದೇ ಸರಕಾರಿ ನೌಕರಿಯಲ್ಲಿ ಮುಸ್ಲಿಂ ನೌಕರರ ಮೇಲೆ ಜಾತಿ ನಿಂದನೆ, ಲೈಂಗಿಕ ಕಿರುಕುಳ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ಸಮುದಾಯದ ಹಕ್ಕು, ಗೌರವ ಮತ್ತು ಭದ್ರತೆಗೆ ‘ಅಲ್ಪಸಂಖ್ಯಾತರ ದೌರ್ಜನ್ಯ ಕಾಯ್ದ’ ತರಬೇಕು ಎಂದು ಒತ್ತಾಯಿಸಲಾಗಿದೆ.

ಮನವಿ ಪತ್ರ ನೀಡುವ ಸಂದರ್ಭದಲ್ಲಿ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಸೌಹಾರ್ದ ಸಮಿತಿ ಸಂಯೋಜಕ ಆಲಂ ಘನಿ, ಸದಸ್ಯರುಗಳಾದ ಮಾಸ್ತನ್ ನಾಯಕ ಖಾನಾಪುರ, ತಾಜುದ್ದೀನ್, ಎಂ.ಡಿ.ಸಲೀಂ ಸೇರಿದಂತೆ ಹಲವರು ಇದ್ದರು.


Share It

You cannot copy content of this page