ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ನಾಳೆ(ಗುರುವಾರ) ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಿವಂಗತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಶಾಂತಿಯುತವಾಗಿ ಬಂದು ಅಂತಿಮ ದರ್ಶನ ಪಡೆದುಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ ಜಗದೀಶ ಮನವಿ ಮಾಡಿದ್ದಾರೆ.