Education News

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

Share It

ಬೆಂಗಳೂರು: ರಾಜ್ಯದಲ್ಲಿ ನೆಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಪಾಲ್ಗೊಂಡಿರುವ ಕಾರಣಕ್ಕೆ ಗುರುವಾರದಿಂದ ಆರಂಭವಾಗಬೇಕಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಅನ್ನು ಮುಂದೂಡಲಾಗಿದೆ.

ಮುಂದಿನ ಎಲ್ಲ ರೀತಿಯ ಕೌನ್ಸೆಲಿಂಗ್ ದಿನಾಂಕಗಳನ್ನು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಒಟ್ಟಿನಲ್ಲಿ 2024-25ನೇ ಸಾಲಿನ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಾಲ್ಕನೇ ಬಾರಿ ಮುಂದಕ್ಕೆ ಹಾಕಲಾಗಿದೆ.

ಕೌನ್ಸೆಲಿಂಗ್ ವೇಳಾಪಟ್ಟಿಯ ಪ್ರಕಾರ ಜೂನ್ ತಿಂಗಳಿನಲ್ಲಿಯೇ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಶಿಕ್ಷಕರ ಹೊಂದಾಣಿಕೆ ಸಮಸ್ಯೆಯಿಂದಾಗಿ ಮೂರು ಬಾರಿ ಮುಂದೂಡಲಾಗಿತ್ತು. ಈಗ ಸಮೀಕ್ಷೆಯ ಕಾರಣಕ್ಕೆ ಮತ್ತೆ ವರ್ಗಾವಣೆಯನ್ನು ಮತ್ತೆ ಮುಂದೂಡಲಾಗಿದೆ.


Share It

You cannot copy content of this page