News

ಋತುಚಕ್ರ ರಜೆ ಘೋಷಣೆ; ಅಭಿನಂದಿಸಿದ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ

Share It

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದ್ದು, ಇದಕ್ಕೆ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಮಹಿಳೆಯರು ಅಬಲೆಯರಲ್ಲ ಸಬಲೆಯರಾಗಿ ಹೊರಹೊಮ್ಮಿದ್ದಾರೆ. ಮಹಿಳೆಯು ಕುಟುಂಬದ ಜವಾಬ್ದಾರಿಯ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಶ್ರಮಿಸುವವಳು ಆಗಿದ್ದಾಳೆ. ತಂದೆ, ತಾಯಿ ಅತ್ತೆ, ಮಾವ, ಗಂಡ, ಮಕ್ಕಳು ಹೀಗೆ ಕುಟುಂಬದವರ ಎಲ್ಲರ ಯೋಗಕ್ಷೇಮ ನೋಡಿಕೊಂಡು ನಂತರ ಸಮಯದ ಗಮನಕಡೆ ಕೋಡದೇ ತನ್ನ ಕೆಲಸದಲ್ಲಿ ನಿರತರಾಗಿರುತ್ತಾಳೆ. ದಣಿವರಿಯದ ಕೆಲಸ ಮಾಡುವ ಮಹಿಳೆಯರು ಪ್ರತಿ ತಿಂಗಳ ಋತುಚಕ್ರದ ಸಂದರ್ಭದಲ್ಲಿ ಮಾನಸಿಕ, ದೃಹಿಕವಾಗಿ ಯಾತೆನೆ ಅನುಭವಿಸುತ್ತಾಳೆ ಅದರೇ ಇದೆಲ್ಲವನ್ನು ಲೆಕ್ಕಿಸದೇ ತನಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಾಳೆ ಎಂದು ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟದಲ್ಲಿ ಋತುಚಕ್ರದ ಸಂದರ್ಭದಲ್ಲಿ ವೇತನಸಹಿತ ಒಂದು ದಿನದ ರಜಾ ನೀಡಬೇಕು ಎಂದು ಸರ್ಕಾರ ಸಚಿವ ತೀರ್ಮಾನ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಸಂತಸದ ತೀರ್ಮಾನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ರೋಶಿನಿ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.


Share It

You cannot copy content of this page