ಬೆಂಗಳೂರು: ಬಾಲ ಭವನ ಸೊಸೈಟಿ, ಬೆಂಗಳೂರು ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿಯ ಸ್ಥಳೀಯ ಮಟ್ಟದ ಆಯ್ಕೆ ಶಿಬಿರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೃಜನಾತ್ಮಕ ಪ್ರದರ್ಶನ ಕಲೆ, ಸೃಜನಾತ್ಮ ಕಲೆ, ಸೃಜನಾತ್ಮಕ ಬರವಣೆಗೆ ಮತ್ತು ವಿಜ್ಞಾನದಲ್ಲಿ ನೂತನ ಅವಿಷ್ಕಾರ ಪ್ರಕಾರ/ ಕ್ಷೇತ್ರಗಳಲ್ಲಿ ಪರಿಣಿತ/ಅನುಭವ ಹೊಂದಿರುವ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಪರಿಣಿತಿ/ಅನುಭವ ಹೊಂದಿರುವ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ, ಅಕ್ಟೋಬರ್ ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿದೆ.
ಅರ್ಜಿಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಬಾಲ ಭವನ ಸೊಸೈಟಿ , ಕಬ್ಬನ್ ಉದ್ಯಾನವನ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-22864189 ಗೆ ಸಂಪರ್ಕಿಸಬಹುದಾಗಿದೆ.