Agriculture Education News

ಶ್ರೇಷ್ಠ ತೋಟಗಾರಿಕಾ ರೈತ-ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Share It

ಬೆಂಗಳೂರು: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಿಂದ ಶ್ರೇಷ್ಠ ತೋಟಗಾರಿಕಾ ರೈತ/ ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26ರ ಸಾಲಿನಲ್ಲಿ ಡಿ.21 ರಿಂದ 23ರ ವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ತೋಟಗಾರಿಕೆ ಮೇಳವನ್ನು ಹಮ್ಮಿಕೊಂಡಿದ್ದು, ವಿವಿ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ತೋಟಗಾರಿಕಾ ರೈತ ಅಥವಾ ರೈತ ಮಹಿಳೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಗಲಿದೆ.

ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ಸಾಧಕ ರೈತ ಅಥವಾ ರೈತ ಮಹಿಳೆ ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಛಾಯಾ ಚಿತ್ರಗಳ ಮೂಲಕ ದೃಢೀಕರಿಸಿ ಸಲ್ಲಿಸಬೇಕು. ಬಾಗಲಕೋಟೆ ಜಿಲ್ಲೆಯ ರೈತ ಅಥವಾ ರೈತ ಮಹಿಳೆ ಅರ್ಜಿ ನಮೂನೆಯನ್ನು ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಬಾಗಲಕೋಟೆ ಕಚೇರಿಯಿಂದ ಅಥವಾ ವಿಸ್ತರಣಾ ಮುಂದಾಳು, ವಿಸ್ತರಣಾ ನಿರ್ದೇಶನಾಲಯದಿಂದ ಅಥವಾ ತೋಟಗಾರಿಕೆ ವಿಜ್ಞಾನಗಳ ವಿವಿಯ ಅಂತರ್ಜಾಲದ ಮೂಲಕವು ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ನ.5 ರೊಳಗಾಗಿ ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಬಾಗಲಕೋಟ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845655856, 9538243305 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Share It

You cannot copy content of this page