ಬೆಂಗಳೂರು: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ 1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಸ್ಥಗಿತಗೊಳ್ಳಲಿದೆ.
ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು www.cescmysore.co.in ಪೋರ್ಟಲ್ ಗಳ ಮೂಲಕ ಮಾಡುವ ಆನ್ ಲೈನ್ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಅಲಭ್ಯವಾಗಲಿದೆ.
ಈ ದಿನಗಳಂದು ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಇರುವುದಿಲ್ಲ ಎಂದು ಬೆಸ್ಕಾಂ ಸಹ ಪ್ರಕಟಣೆಯಲ್ಲಿ ತಿಳಿಸಿದೆ.
