ಬೆಂಗಳೂರು: ಕಾಂಗ್ರೆಸ್ ಪಕ್ಷ ದುರಾಡಳಿತಕ್ಕೆ ಜನರು ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ. ಬೆಂಗಳೂರು ಪಂಚ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಐದು ಮೇಯರ್ ಗಳು ನಮ್ಮ ಪಕ್ಷದಿಂದ ಆಯ್ಕೆಯಾಗಲಿದ್ದಾರೆ ಎಂದು ಉತ್ತರ ನಗರಾಧ್ಯಕ್ಷ ಎಸ್.ಹರೀಶ್ ಹೇಳಿದರು.
ಬುಧವಾರ ಬಿಜೆಪಿ ನಗರ ಜಿಲ್ಲಾ ಕಛೇರಿಯಲ್ಲಿ ದೀಪಾವಳಿ ಹಬ್ಬದ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ತಾಯಿ ಹೆಸರಿನಲ್ಲಿ ಸಸಿ ನೆಡಲು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನವಿರೋಧಿ, ಸಂವಿಧಾನ ವಿರೋಧಿ ಕಾಂಗ್ರೆಸ್ ಪಕ್ಷದ ಆಡಳಿತದಿಂದ ರಾಜ್ಯದ ಜನರು ರೋಸಿಹೋಗಿದ್ದಾರೆ. ಗಾರ್ಡನ್ ಸಿಟಿ, ಐಟಿ ಬಿಟಿ ಸಿಟಿ ಬೆಂಗಳೂರು ಇಂದು ಗುಂಡಿಗಳ ನಗರವಾಗಿದೆ. ಗುಂಡಿ ಮುಚ್ಚಿ ಎಂದು ಹೇಳಿದರೆ ಉಡಾಫೆಯ ಉತ್ತರ ನೀಡುವ ಕಾಂಗ್ರೆಸ್ ಲೀಡರ್ ಗಳು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ದುರಾಡಳಿತಕ್ಕೆ ಜನರು ತಕ್ಕ ಪಾಠ ಕಲಿಸಲು ಕಾಯುತ್ತಿದ್ದಾರೆ. ಬೆಂಗಳೂರು ಪಂಚ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.
ಪ್ರಧಾನಿ ನರೇಂದ್ರಮೋದಿರವರ ಆಶಯಂದಂತೆ ಇಂದು ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು ಷೋಷಣೆ ಮಾಡುವುದರಿಂದ ಪರಿಸರ ರಕ್ಷಣೆ ಜೊತೆಯಲ್ಲಿ ತಾಯಿ ಹೆಸರು ಜೀವಂತವಾಗಿ ಇರಲಿದೆ. ಅದ್ದರಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಿಜೆಪಿ ಪ್ರಮುಖರು, ಕಾರ್ಯಕರ್ತರಿಗೆ ಸಸಿಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಶಾಸಕ ಸಿ.ಕೆ.ರಾಮಮೂರ್ತಿ, ಮಾಜಿ ಶಾಸಕರುಗಳಾದ ನೆ.ಲ.ನರೇಂದ್ರಬಾಬು, ಅಖಂಡ ಶ್ರೀನಿವಾಸಮೂರ್ತಿ, ವಿಧಾನಪರಿಷತ್ ಸದಸ್ಯ ಕೇಶವಪ್ರಸಾದ್ ಮತ್ತು ಉತ್ತರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಹರೀಶ್ ರವರು, ಕೇಂದ್ರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಾಜಿ ಮಹಾಪೌರ ಗೌತಮ್ ಕುಮಾರ್ ಕಛೇರಿ ಪೂಜೆ ನೆರವೇರಿಸಿದರು.
