News

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅರಿವು ಸಪ್ತಾಹ

Share It

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27 ರಿಂದ ನವೆಂಬರ್ 2 ರವರೆಗೆ ಜಾಗೃತಿ ಅರಿವು ಸಪ್ತಾಹ-2025 ಹಮ್ಮಿಕೊಳ್ಳಲಾಗಿದೆ.

ಸಪ್ತಾಹದ ಅಂಗವಾಗಿ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ/ ನೌಕರರಿಗೆ ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 334 ಸಮ್ಮೇಳನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ಈ ವರ್ಷದ ಜಾಗೃತಿ ಅರಿವು ಸಪ್ತಾಹದ ಆಚರಣೆಯ ವಿಷಯ “Vigilance: Our Shared Responsibility” ಆಗಿದೆ. ಸಪ್ತಾಹವನ್ನು ಎಲ್ಲಾ ಇಲಾಖೆಗಳಲ್ಲಿ ತಪ್ಪದೇ ಆಚರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.


Share It

You cannot copy content of this page