News

ವೈದ್ಯಕೀಯ ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟದಡಿ ಮೊದಲನೇ ವರ್ಷದ ಎಂಬಿಬಿಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. ಸಮಾಜದಲ್ಲಿ ಜಾತಿವ್ಯವಸ್ಥೆಯಿಂದ ಅಸಮಾನತೆಯಿದೆ. ಸಮಾನತೆಯನ್ನು ಸಾಧಿಸಿ ಸಮಸಮಾಜವನ್ನು ನಿರ್ಮಿಸಬೇಕಿದೆ. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾಳಿದಾಸ  ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಪ್ರಶಂಸಾರ್ಹ ಕಾರ್ಯವನ್ನು ಮಾಡುತ್ತಿದೆ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು.


Share It

You cannot copy content of this page