Law

ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ವಶಪಡಿಸಿಕೊಳ್ಳಲು ಹೈಕೋರ್ಟ್ ಆದೇಶ

Share It

ಚೆನ್ನೈ: ಸರ್ಕಾರದ ಎಲ್ಲಾ ಅಧಿಕಾರಿಗಳ ವಿಶೇಷವಾಗಿ ಪೊಲೀಸ್ ಅಧಿಕಾರಿಗಳ ಆಸ್ತಿಗಳನ್ನು ಪರಿಶೀಲಿಸುವಂತೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆದೇಶಿಸಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಶಿಸ್ತು ಕ್ರಮಕ್ಕೆ ಗುರಿಯಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸುವ ವೇಳೆ ನ್ಯಾ. ಎಸ್.ಎಂ. ಸುಬ್ರಮಣಿಯಂ ಅವರಿದ್ದ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ದೇಶದಾದ್ಯಂತ ಭ್ರಷ್ಟಾಚಾರ ವಿಪರೀತ ಆಳಕ್ಕೆ ಬೇರೂರಿದೆ. ಅನಿಯಂತ್ರಿತವಾಗಿರುವ ಈ ಪಿಡುಗು ನಾಗಾಲೋಟದಲ್ಲಿ ಮುಂದುವರೆದಿದೆ. ಸರ್ಕಾರಿ ನೌಕರರು, ಐಎಎಸ್, ಐಪಿಎಸ್ ಅಷ್ಟೇ ಅಲ್ಲದೆ ನ್ಯಾಯಾಂಗವನ್ನೂ ಆವರಿಸಿದೆ ಎಂದು ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದೇ ವೇಳೆ ಸರ್ಕಾರಿ ನೌಕರರು ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವಂತೆ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ರಾಜ್ಯ ಸರ್ಕಾರದ ಗೃಹ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ನಿಯಮಾನುಸಾರ ಪೊಲೀಸ್ ಅಧಿಕಾರಿಗಳು ನೇಮಕಗೊಂಡ 3 ತಿಂಗಳಲ್ಲಿ ಹಾಗೂ ನಂತರದ ಪ್ರತಿ 5 ವರ್ಷಗಳಿಗೊಮ್ಮೆ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಈ ಆಸ್ತಿ ವಿವರದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆದೇಶಿಸಿದೆ.

ಹಾಗೆಯೇ, ಪೊಲೀಸ್ ಅಧಿಕಾರಿಗಳ ಆಸ್ತಿಯ ಕುರಿತು ಪರಿಶೀಲನೆ ನಡೆಸಬೇಕು. ಅವರು ಘೋಷಿಸಿರುವ ಆಸ್ತಿಯ ಜತೆಗೆ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಆಪ್ತರ ಹೆಸರಿನಲ್ಲಿ ಖರೀದಿಸುವ ಆಸ್ತಿಗಳ ದಾಖಲೆಗಳನ್ನು ಕೂಡ ಪರಿಶೀಲಿಸಿ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚಿ ಜಪ್ತಿ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಹೈಕೋರ್ಟ್ ತೀರ್ಪು: The respondents one and two (The Secretary to Government, Home Department, & The Director General of Police) are directed to verify the mandatory declarations being given by the Police Officials periodically across the state of Tamil Nadu with reference to rule 9 of the Tamil Nadu Subordinate Police Officers Conduct Rules, 1964, and verify the genuinity of the declarations including all the assets purchased in the name of the family members, relatives and persons known to them. In the event of any discrepancies, contradictions or otherwise, all appropriate actions have to be initiated, including confiscation of illegally accumulated wealth through corrupt practices.)

(W.P.No.6677 of 2010)


Share It

You cannot copy content of this page