Law

ಪ್ರೀತಿ ಹಳಸಿದಾಗ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಾಗದು: ಹೈಕೋರ್ಟ್

Share It

ಬೆಂಗಳೂರು: ಸುಧೀರ್ಘ ಆರು ವರ್ಷಗಳ ಕಾಲ ಪ್ರೀತಿಸಿದ ವಯಸ್ಕರ ನಡುವಿನ ಪರಸ್ಪರ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು  ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಮಾಜಿ ಪ್ರೇಯಸಿ ತನ್ನ ವಿರುದ್ಧ ಬೆಂಗಳೂರಿನ ಜೀವನ್ ಬಿಮಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಅರ್ಜಿದಾರನ ವಿರುದ್ಧದ ವಂಚನೆ, ಅತ್ಯಾಚಾರ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ. ಆದರೆ, ಇಬ್ಬರ ನಡುವಿನ ಸಂಬಂಧ 6 ವರ್ಷಗಳದ್ದಾಗಿದ್ದು, ಪ್ರೀತಿ ಕ್ಷೀಣಿಸಿದ ಕಾರಣಕ್ಕೆ ಒಪ್ಪಿತ ದೈಹಿಕ ಸಂಬಂಧವನ್ನು ಅತ್ಯಾಚಾರ ವ್ಯಾಪ್ತಿಯಲ್ಲಿ ಪರಿಗಣಿಸಲಾಗದು ಎಂದು ಅಭಿಪ್ರಾಯಪಟ್ಟು ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

(CRIMINAL PETITION No.7704 OF 2022)


Share It

You cannot copy content of this page