News

ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

Share It

ಬೆಂಗಳೂರು: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿನ ಕ್ರೀಡಾ ವಿದ್ಯಾರ್ಥಿ ನಿಲಯದ ಸಾಮಗ್ರಿಗಳು, ಗ್ರಂಥಾಲಯದ ಪುಸ್ತಕಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್, ಸಿವಿಲ್ ಅನುಪಯುಕ್ತ ಉಪಕರಣಗಳು ಮತ್ತು ವಸ್ತುಗಳನ್ನು ನ.26 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಿದೆ.

ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಛೆಯುಳ್ಳವರು ನ. 25 ರ ಬೆಳಗ್ಗೆ 10.30 ರಿಂದ ನ.26 ಬೆಳಗ್ಗೆ 10.30 ರೊಳಗೆ 12,500 ರೂ. ಗಳ ಮುಂಗಡ ಠೇವಣಿ ಹಣವನ್ನು ಸಂಸ್ಥೆಯ ನಗದು ವಿಭಾಗದಲ್ಲಿ ಪಾವತಿಸಿ, ಹರಾಜಿನಲ್ಲಿ ಭಾಗವಹಿಸಬಹುದಾಗಿದೆ.

ನಿಯಮಾನುಸಾರ ಹರಾಜು ಪ್ರಕ್ರಿಯೆ ಮುಗಿದ ನಂತರ ಸಿಗದಿದ್ದಂತಹ ಬಿಡ್‌ದಾರರಿಗೆ ಅವರು ಪಾವತಿಸಿರುವ ಮುಂಗಡ ಹಣ ಠೇವಣಿ ಹಣವನ್ನು ಹಿಂತಿರುಗಿಸಲಾಗುವುದು ಎಂದು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page