ಬೆಂಗಳೂರು: ಭಾರತೀಯ ಪತ್ರಿಕಾ ಮಂಡಳಿ ವತಿಯಿಂದ ನವೆಂಬರ್ 16 ರಂದು ಮಧ್ಯಾಹ್ನ 12.30 ಕ್ಕೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ವರ್ಷ “ಹೆಚ್ಚುತ್ತಿರುವ ತಪ್ಪು ಮಾಹಿತಿಯ ನಡುವೆ ಪತ್ರಿಕಾ ವಿಶ್ವಾಸಾರ್ಹತೆಯನ್ನು ರಕ್ಷಿಸುವುದು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ, ರೈಲ್ವೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಭಾಗವಹಿಸಲಿದ್ದಾರೆ.
ಗೌರವಾನ್ವಿತ ಅತಿಥಿಯಾಗಿ ಕೇಂದ್ರ ಮಾಹಿತಿ, ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಡಾ.ಎಲ್.ಮುರುಗನ್ ಭಾಗವಹಿಸಲಿದ್ದು, ಭಾರತೀಯ ಪತ್ರಿಕಾ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಜೋಶಿ ಪ್ರಮುಖ ಭಾಷಣ ಮಾಡಲಿದ್ದಾರೆ. ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷೆ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
